ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾವಿರ ಗಡಿ ದಾಟಿದ ಕೊರೋನಾ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾವಿರ ಗಡಿ ದಾಟಿದ ಕೊರೋನಾ ಸೋಂಕು


ಮಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಏರಿಕೆ ಕಂಡಿದ್ದು ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಸಾವಿರದ ಗಡಿ ತಲುಪಿದೆ. 

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ 1058 ಕ್ಕೆ ತಲುಪಿದ್ದು ಇಂದು ಯಾವುದೇ ಸಾವಿನ ಪ್ರಕರಣ ದಾಖಲಾಗಿಲ್ಲ. ಸರಕಾರದ ಆದೇಶದ ಮೇರೆಗೆ, ಜನಸಾಮಾನ್ಯರು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ. ಮುಖಗವಸು ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸಿದ್ದಲ್ಲಿ ದಂಡವನ್ನು ನಗರ ಸ್ಥಳೀಯ ಸಂಸ್ಥೆಗಳು, ಪೋಲಿಸ್ ಇಲಾಖೆ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ವಸೂಲಾತಿ ಮಾಡಲಾಗುವುದು.

ತಾರೀಕು 17. 1. 2022 ರಂದು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್- 19 ರ ಸ್ಥಿತಿಗತಿ ಬಗ್ಗೆ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳ, ಆರೋಗ್ಯ ಇಲಾಖೆ ಅಧಿಕಾರಿಗಳ ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ / ಪ್ರಾಂಶುಪಾಲರ ಸಭೆಯ ನಡವಳಿಗಳು: 
ಹಾಜರಿದ್ದ ಸದಸ್ಯರು:
1. ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ 
2. ಜಿಲ್ಲಾ ಆರೋಗ್ಯ ಅಧಿಕಾರಿಗಳು, ದ.ಕ. 
3. ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ. 
4. ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ದ.ಕ. 
5. ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಲಯ ಪರವಾಗಿ 
6. ಪ್ರಾಂಶುಪಾಲರು, ದಕ್ಷಿಣ ಕನ್ನಡ ಜಿಲ್ಲಾ ಲೀಡ್ ಕಾಲೇಜ್
7. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು 
8. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು 
9. ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು 
10. ಜಿಲ್ಲೆಯ ಸರಕಾರಿ , ಖಾಸಗಿ , ಅನುದಾನಿತ, ಸ್ವಾಯತ್ತ ಕಾಲೇಜುಗಳ ಮತ್ತು ಡೀಮ್‌ ವಿಶ್ವವಿದ್ಯಾಲಯಗಳ ಪ್ರಾಂಶುಪಾಲರು / ಕೋವಿಡ್ ನೋಡಲ್ ಅಧಿಕಾರಿಗಳು.
11. ಕೋವಿಡ್ ನೋಡಲ್ ಅಧಿಕಾರಿ, ದ. ಕ. ಜಿಲ್ಲೆಯ ಸ್ವಾಯತ್ತ ಮತ್ತು ಡೀಮ್ ವಿಶ್ವವಿದ್ಯಾಲಯಗಳು


ಸಭೆಯಲ್ಲಿ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು . ಹೆಚ್ಚಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳ ಮತ್ತು ಮುಖ್ಯಸ್ಥರುಗಳ ಜವಾಬ್ದಾರಿಯನ್ನು ಮಾನ್ಯ ಜಿಲ್ಲಾಧಿಕಾರಿಗಳು ವಿವರಿಸಿ , ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತದ ಜೊತೆಗೆ ಎಲ್ಲರೂ ಕೈಜೋಡಿಸುವಂತೆ ತಿಳಿಸಿದರು . 

ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆಗಳು ವರದಿಯಾಗಿದ್ದರೂ, ಪರಿಸ್ಥಿತಿ ವೈದ್ಯಕೀಯವಾಗಿ ಗಂಭೀರವಾಗಿಲ್ಲದ ಕಾರಣ ಮತ್ತು ಸಭೆಯಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಅಥವಾ ಭೌತಿಕ ತರಗತಿಗಳನ್ನು ರದ್ದುಗೊಳಿಸುವ ಅಗತ್ಯವಿಲ್ಲವೆಂದು ಅಭಿಪ್ರಾಯ ವ್ಯಕ್ತವಾದ ಕಾರಣ, ಮುಂದಿನ ಒಂದು ವಾರಗಳ ಕಾಲ ಮುನ್ನೆಚ್ಚರಿಕಾ ಕ್ರಮವಾಗಿ ಈ ಕೆಳಗಿನಂತ ನಿರ್ಧರಿಸಲಾಯಿತು:


1. ಶಾಲಾ - ಕಾಲೇಜುಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಕೋವಿಡ್ ಸುರಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

2. ಶೈಕ್ಷಣಿಕ ತರಗತಿಗಳನ್ನು ಹೊರತುಪಡಿಸಿ ಯಾವುದೇ ಸಾಂಸ್ಕೃತಿಕ , ಕ್ರೀಡಾ ಮತ್ತಿತರ ಸಮೂಹ ಚಟುವಟಿಕೆಗಳಿಗೆ ಮುಂದಿನ ಆದೇಶದ ವರೆಗೆ ಅವಕಾಶವಿಲ್ಲ .

3. 5 ಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಕೇಸುಗಳು ಬಂದ ಸಂದರ್ಭದಲ್ಲಿ ಅಂತಹ ಶಾಲೆ ಅಥವಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ರದ್ದು ಪಡಿಸಿ ಆನ್ಲೈನ್ ತರಗತಿಗಳನ್ನು ನಡೆಸಬೇಕು.

4. ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹಾಸ್ಟೆಲುಗಳಲ್ಲಿ ಅಥವಾ ಮನೆಗಳಲ್ಲಿ ಐಸೋಲೇಶನ್ ಗೆ ಒಳಪಡಿಸಬೇಕು.

5. ಎಂಟರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶೇಕಡ 100 ವ್ಯಾಕ್ಸಿನೇಷನ್ ಗುರಿ ತಲುಪಲು ಪ್ರಯತ್ನಿಸಬೇಕು. 

6. ಶಾಲೆಗಳಲ್ಲಿ ಕಡ್ಡಾಯವಾಗಿ ಹೆತ್ತವರ ಮತ್ತು ಶಿಕ್ಷಕರ ಸಭೆಯನ್ನು ಕರೆದು ಭೌತಿಕ ಅಥವಾ ಆನ್ಲೈನ್ ಕ್ಲಾಸ್ ಗಳ ಬಗ್ಗೆ ಅವರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು.

7. ಶಾಲೆಗಳಲ್ಲಿ ಭೌತಿಕ ತರಗತಿಗಳಿಗೆ ಹಾಜರಾಗಲು ಸಿದ್ಧರಿಲ್ಲದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಕಡ್ಡಾಯವಾಗಿ ವ್ಯವಸ್ಥೆ ಮಾಡಬೇಕು ಮತ್ತು ಅವಕಾಶ ಕಲ್ಪಿಸಿಕೊಡಬೇಕು.

8. ಡಿಡಿಪಿಐ ಕಚೇರಿಯಿಂದ ಆನ್ಲೈನ್  ಕ್ಲಾಸುಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಹೆತ್ತವರಿಗೆ ಅನುಕೂಲವಾಗುವಂತ ಸಹಾಯವಾಣಿ ಸಂಖ್ಯೆಯನ್ನು ತಕ್ಷಣ ಪ್ರಾರಂಭಿಸಬೇಕು.

9.ಅಂತರರಾಜ್ಯ ವಿದ್ಯಾರ್ಥಿಗಳು ಹೆಚ್ಚಿರುವ ಕಾಲೇಜುಗಳಲ್ಲಿ ಮತ್ತು ಪಕ್ಕದ ರಾಜ್ಯದಿಂದ ದಿನನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳು ಹೆಚ್ಚಿರುವ ಶಾಲೆ ಕಾಲೇಜುಗಳಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತ ಸೂಚಿಸಲಾಯಿತು.

10. ಕೆಲವು ಸ್ವಾಯತ್ತ ವಿದ್ಯಾಸಂಸ್ಥೆಗಳು ತಮ್ಮ ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿ ಭೌತಿಕ ತರಗತಿಗಳನ್ನು ರದ್ದುಪಡಿಸಿ ಆನ್ಲೈನ್ ತರಗತಿಗಳನ್ನು ನಡೆಸುತ್ತಿರುವುದನ್ನು ಗಮನಿಸಲಾಯಿತು ಮತ್ತು ಅದನ್ನು ಅಗತ್ಯವಿರುವಷ್ಟು ದಿನ ಮುಂದುವರಿಸುವಂತೆ ಸೂಚಿಸಲಾಯಿತು .

11. ತಾರೀಕು 24.01.2022 ರಂದು ಮತ್ತೊಮ್ಮೆ ಸಭೆ ಸೇರಿ ಪರಿಸ್ಥಿತಿಯ ಅವಲೋಕನ ನಡೆಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಯಿತು.

Ads on article

Advertise in articles 1

advertising articles 2

Advertise under the article