ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿಗಳ ಸೆರೆ

ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿಗಳ ಸೆರೆ

ಮಂಗಳೂರು ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಬೇಕೆಂದು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ದಂಪತಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ರಾಪ್ ಪ್ರಕರಣವೊಂದನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. 

ಪ್ರಕರಣದ ವಿವರ

ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ ವ್ಯಕ್ತಿಯೋರ್ವರನ್ನು ಭೇಟಿಯಾಗಿದ್ದ ದಂಪತಿಗಳು ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಮನೆಯಲ್ಲಿ ಪೂಜೆಯನ್ನು ಮಾಡಿಕೊಡಬೇಕೆಂದು ಪುರೋಹಿತರನ್ನು ಮನೆಗೆ ಕರೆಯಿಸಿಕೊಂಡು ಮನೆಯಲ್ಲಿರುವ ಸಮಯ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವೀಡಿಯೋವನ್ನು ತೆಗೆದು ನಂತರ ಈ ವೀಡಿಯೋ ಹಾಗೂ ಫೋಟೋವನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಲವು ಬಾರಿ ಪಿರ್ಯಾದಿದಾರರನ್ನು ಹೆದರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ ಹಣದ ಬೇಡಿಕೆ ಇಟ್ಟು ರೂ 15 ಲಕ್ಷ ನಗದು ಹಣ ಹಾಗೂ ಸುಮಾರು 34 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತೆಗಳಿಂದ ಆರೋಪಿಗಳು ನೀಡಿದ ಬ್ಯಾಂಕ್ ಬೇರೆ ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ..ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. 

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ 

1. ಭವ್ಯ, ಪ್ರಾಯ(30), ವಾಸ: ಮೇನ್ನ, ನೀಡತಾ, ಮೈಲಾಪುರ ಗ್ರಾಮ, ಶನಿವಾರ ಸಂತೆ, ಸೋಮವಾರಪೇಟೆ, ಕೊಡಗು ಜಿಲ್ಲೆ. ಹಾಲಿ ವಾಸ: ಫ್ಲಾಟ್ ನಂಬ್ರ: 104, ಮೇರಿಹಿಲ್ ವ್ಯೂ ಆಪಾರ್ಟ್ ಮೆಂಟ್, ಮೇರಿಹಿಲ್ ಮಂಗಳೂರು. (ವೃತ್ತಿ : ಮನೆ ವಾರ್ತೆ)
2. ಕುಮಾರ್ @ ರಾಜು, ಪ್ರಾಯ(35), ವಾಸ:  ಅರಕಲಗೂಡು ತಾಲೂಕು, ಹಾಸನ ಜಿಲ್ಲೆ, ಹಾಲಿ ವಾಸ: ಫ್ಲಾಟ್ ನಂಬ್ರ: 104, ಮೇರಿಹಿಲ್ ವ್ಯೂ ಆಪಾರ್ಟ್ ಮೆಂಟ್, ಮೇರಿಹಿಲ್ ಮಂಗಳೂರು. (ವೃತ್ತಿ:  ಕಾರು ಚಾಲಕ) 

ಎಂಬವರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರಿಯುವುದು. ಆರೋಪಿಗಳ ವಶದಿಂದ ರೂ 37,000/- ಮೌಲ್ಯದ ಎರಡು 2 ಚಿನ್ನದ ರಿಂಗ್, ನಗದು ಹಣ ರೂ. 31,000/-ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರಿಯುವುದು. ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಆರೋಪಿಗಳ ಪೈಕಿ ಕುಮಾರ್ ನು ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ಫಿರ್ಯಾದಿದಾರರ ಜೊತೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿಕೊಂಡು ಹಣ ವಸೂಲಿ ಮಾಡಿರುವುದಾಗಿದೆ. 

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಫಿರ್ಯಾದಿದಾರರಿಂದ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿರುವುದಲ್ಲದೇ, ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ  ಮನೆ ಸಾಮಾಗ್ರಿಗಳನ್ನು ಖರೀದಿಸಿರುತ್ತಾರೆ. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ.  ಆರೋಪಿಗಳ ಪೈಕಿ ಭವ್ಯಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ ಎಂದು ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

Ads on article

Advertise in articles 1

advertising articles 2

Advertise under the article