
ಹಿಜಾಬ್ ತೀರ್ಪು ಹಿನ್ನೆಲೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
Monday, March 14, 2022
Edit
ಮಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ವಿಚಾರದಲ್ಲಿ, ನಾಳೆ ಹೈಕೋರ್ಟ್ ತೀರ್ಪು ಪ್ರಕಟಿಸುವ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ರಜೆ ಘೋಷಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನ ತೀರ್ಪು ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಾಲಾ ಕಾಲೇಜುಗಳಲ್ಲಿ ನಡೆಯುವ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇತರ ಪರೀಕ್ಷೆಗಳು ಮೊದಲೇ ನಿಗದಿ ಪಡಿಸಿದ ವೇಳಾ ಪಟ್ಟಿಯಂತೆ ನಡೆಯಲಿದೆ.
ನಾಳೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ ಆಯೋಜಿಸಿರುವ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.