ಮಂಗಳೂರಿನ ಪೊರ್ಕೊಡಿಯಲ್ಲಿ ಬೆಲೆ ಬಾಳುವ ಚಿನ್ನಾಭರಣ ಕಳವು - ಆರೋಪಿ ಬಂಧನ
Tuesday, September 5, 2023
Edit
ಮಂಗಳೂರಿನ ಬಜಪೆಯ ಠಾಣಾ ವ್ಯಾಪ್ತಿಯ ಪೊರ್ಕೊಡಿ ಗ್ರಾಮದಲ್ಲಿ 5 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳವು ನಡೆದ ಪ್ರಕರಣ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಜಪೆಯ ತಾರೀಕಂಬ್ಳ ನಿವಾಸಿ ವಿನ್ಸೆಂಟ್ ಡಿ”ಸೋಜಾ (34) ಬಂಧಿತ ಆರೋಪಿ.
ಮಂಗಳೂರು ತಾಲೂಕಿನ ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ಕಡೆಗೆ ಹೋಗುವ ರಸ್ತೆಯಲ್ಲಿ ಕರೋಡಿ ಎಂಬಲ್ಲಿರುವ ಮನೆಯೊಂದರ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಮಿನಿಲಾಕರ್ ನ್ನು ಮುರಿದು ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವಾಗಿರುವ ಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 1 ರಂದು ದಾಖಲಾಗಿತ್ತು.
ಕೇಸಿನಲ್ಲಿ ಗುಮಾನಿತ ವ್ಯಕ್ತಿಯಾದ ಬಜಪೆಯ ತಾರೀಕಂಬ್ಳ ನಿವಾಸಿ ವಿನ್ಸೆಂಟ್ ಡಿ”ಸೋಜಾ (34) ಎಂಬವರನ್ನು ಬಜಪೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ನೇತೃತ್ವದ ತಂಡ ಸೆ.4 ರಂದು ಮಧ್ಯಾಹ್ನ ಬಜಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದುಕೊಂಡಿದ್ದರು. ಆರೋಪಿಯಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು (ಚಿನ್ನದ ಕರಿಮಣಿ ಸರ, ಬಿಳಿ ಬಣ್ಣದ ಹರಳುಗಳಿಂದ ಕೂಡಿರುವ ಚಿನ್ನದ ನೆಕ್ಲೆಸ್, ಚಿನ್ನದ ಬಳೆಗಳು-2, ಚಿನ್ನದ ಉಂಗುರಗಳು-3, ಒಂದು ಜೊತೆ ಚಿನ್ನದ ಕಿವಿ ಒಲೆ ಮತ್ತು ಒಂದು ಜೊತೆ ಚಿನ್ನದ ಜುಮುಕಿ) ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ಮಟ್ಟಹಾಕಲು ದೃಡನಿರ್ಧಾರ ಕೈಗೊಂಡಿರುವ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ ಕುಮಾರ್ ಜೈನ್ IPS ರವರ ಮಾರ್ಗದರ್ಶನದಂತೆ, ಮಾನ್ಯ ಡಿ.ಸಿ.ಪಿ ಯವರಾದ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಉತ್ತರ ಉಪ ವಿಭಾಗದ ACP ಯವರಾದ ಮನೋಜ್ ಕುಮಾರ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ ರವರು PSI ಗುರಪ್ಪ ಕಾಂತಿ, PSI ರೇವಣ ಸಿದ್ದಪ್ಪ, PSI ಕುಮಾರೇಶನ್, PSI ಶ್ರೀಮತಿ ಲತಾ, ASI ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾ ಪ್ರಸಾದ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ವರ್ಗದವರು ಪತ್ತೆ ಕಾರ್ಯದಲ್ಲಿ ಭಾಗಿಯಾಗಿರುತ್ತಾರೆ.