ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಪಹರಿಸಿ 350 ಗ್ರಾಂ ಚಿನ್ನ ದರೋಡೆ- ಐವರು ಅರೆಸ್ಟ್

ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಪಹರಿಸಿ 350 ಗ್ರಾಂ ಚಿನ್ನ ದರೋಡೆ- ಐವರು ಅರೆಸ್ಟ್


ಮಂಗಳೂರು: ಕೇರಳ ರಾಜ್ಯದಲ್ಲಿ ಚಿನ್ನದ ಮಳಿಗೆಯನ್ನು ಹೊಂದಿದ್ದ ಚಿನ್ನದ ವ್ಯಾಪಾರಿಯನ್ನು ತಂಡವೊಂದು ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಕಾರಿನಲ್ಲಿ ಅಪಹರಿಸಿ 350ಗ್ರಾಂ ಚಿನ್ನ ದರೋಡೆಗೈದ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ‌

ಶ್ರೀಹರಿ ಭಾನುದಾಸ್ ಥೋರಟ್ ಅವರು ಆ.13ರಂದು ಬೆಳಗ್ಗೆ 7ಗಂಟೆಗೆ 350 ಗ್ರಾಂ ಚಿನ್ನದ ಗಟ್ಟಿಯೊಂದಿಗೆ ಕೇರಳದಿಂದ ರೈಲಿನಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದರು. ರೈಲು ನಿಲ್ದಾಣದಿಂದ ಹೊರಬಂದ ಅವರು ರಿಕ್ಷಾಕ್ಕೆ ಕಾಯುತ್ತಿದ್ದರು. ಈ ವೇಳೆ ನಾಲ್ವರು ಅಪರಿಚಿತರು ಆಗಮಿಸಿ ತಮ್ಮೊಂದಿಗೆ ಬರಬೇಕೆಂದು ಗದರಿಸಿದ್ದಾರೆ. 

ತಂಡ ತಮ್ಮನ್ನು "ನಾವು ಕಸ್ಟಮ್ಸ್ ಅಧಿಕಾರಿಗಳು, ನಿಮ್ಮನ್ನು ಪರಿಶೀಲನೆ ಮಾಡಲು ಬಂದಿದ್ದೇವೆ. ಕಾರಿನಲ್ಲಿ ಕುಳಿತುಕೊಳ್ಳಿ" ಎಂದು ಗದರಿಸಿದ್ದಾರೆ. ಆಗ ಅಲ್ಲಿಗೆ ಇನ್ನೋವಾ ಕಾರೊಂದು ಬಂದಿದ್ದು, ಅದರೊಳಗೆ ಶ್ರೀಹರಿಯನ್ನು ಬಲವಂತವಾಗಿ ತಳ್ಳಿ ಕೂರಿಸಿದ್ದಾರೆ. ಕಾರಿನಲ್ಲಿ ಇನ್ನಿಬ್ಬರು ಆರೋಪಿಗಳಿದ್ದರು. 

ಬಳಿಕ ಉಡುಪಿ ಮೂಲಕ ಕುಮಟಾ ಶಿರಸಿಗೆ ಕರೆದೊಯ್ದು 35 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನದ ಗಟ್ಟಿಯನ್ನು ದರೋಡೆಗೈದಿದ್ದಾರೆ. ಬಳಿಕ ಅವರನ್ನು ಶಿರಸಿ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಚಿನ್ನದ ವ್ಯಾಪಾರಿ ಮಂಗಳೂರಿಗೆ ಆಗಮಿಸಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಶ್ರೀಹರಿಯವರು ಕುಮುಟಾ ಠಾಣೆಯಲ್ಲಿ ದೂರು ನೀಡಿದ್ದಾರೆ‌. ಝೀರೋ ಎಫ್ಐಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಸರಹದ್ದಿನ ಆಧಾರದ ಮೇಲೆ ಮುಂದಿನ ಕ್ರಮದ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಈ ಬಗ್ಗೆ ಅ.ಕ್ರ 171/2025 ಕಲಂ 310(2), 137(2), 204 ಬಿ.ಎನ್. ಎಸ್ ನಂತೆ ಪ್ರಕರಣ ದಾಖಲಾಗಿದೆ‌.



ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಬಿ ಅಧಿಕಾರಿ ಮತ್ತು ಕೇಂದ್ರ ಉಪವಿಭಾಗದಿಂದ ತಂಡವನ್ನು ರಚಿಸಿ ತನಿಖೆ ನಡೆಸಲಾಗಿದೆ. ತನಿಖೆಯಲ್ಲಿ ಕಂಡ ಬಂದ ಸಾಕ್ಷ್ಯಾಧಾರಗಳಿಂದ ಈವರೆಗೆ ಒಟ್ಟು ಐವರು ಆರೋಪಿಗಳನ್ನು ಆಗಸ್ಟ್ 18ರಂದು ಮಹಾರಾಷ್ಟ್ರದ ಪುಣೆ ಎಂಬಲ್ಲಿ ಪತ್ತೆ ಮಾಡಲಾಗಿದೆ. ಆರೋಪಿಗಳು ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗುವುದು. ದರೋಡೆಗೈದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ಇನ್ನಷ್ಟೇ ಸ್ವಾಧೀನ ಪಡಿಸಿಕೊಳ್ಳಬೇಕಿದೆ. 

Ads on article

Advertise in articles 1

advertising articles 2

Advertise under the article