
ಮಂಗಳೂರು, ಆಗಸ್ಟ್ 20: ಧರ್ಮಸ್ಥಳ ವಿರುದ್ದ ಯೂಟ್ಯೂಬರ್ ಗಳ ಅಪಪ್ರಚಾರ : ಕ್ರಮಕ್ಕೆ ನಾರಾವಿ ಗ್ರಾಮಸ್ಥರ ಆಗ್ರಹ
Wednesday, August 20, 2025
Edit
ಮಂಗಳೂರು, ಆಗಸ್ಟ್ 20: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿರುವುದನ್ನು ಖಂಡಿಸಿ ನಾರಾವಿ ಗ್ರಾಮಸ್ಥರು ಕ್ರಮಕ್ಕೆ ಆಗ್ರಹಿಸಿದರು.
ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಕೆಲ ಯೂಟ್ಯೂಬರ್ ಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಾರಾವಿ ಗ್ರಾಮದ ಗ್ರಾಮಸ್ಥರು ಹಾಗೂ ಭಕ್ತರು ಇಂದು ಮಂಗಳೂರಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಘಟನೆಯಿಂದ ನಮಗೆ ತೀವ್ರವಾದ ನೋವುಂಟಾಗಿದೆ ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ. ಮನವಿ ನೀಡುವ ಸಂದರ್ಭದಲ್ಲಿ 30 ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.