ಬೈಕಂಪಾಡಿ – ಪರ್ಫ್ಯೂಮ್ ತಯಾರಿಕಾ ಪ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ
Tuesday, September 9, 2025
Edit
ಪಣಂಬೂರು ಸಪ್ಟೆಂಬರ್ 10: ಪರ್ಫ್ಯೂಮ್ ತಯಾರಿಕಾ ಕಂಪೆನಿ AROMAZEN ಪ್ರೈವೇಟ್ ಲಿ. ಸೇರಿದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಪ್ಯಾಕ್ಟರಿ ಸಂಪೂರ್ಣ ಸುಟ್ಟುಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗೆ 5ರ ಸುಮಾರಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿವೆ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
