ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್
Tuesday, September 2, 2025
Edit
ಉಳ್ಳಾಲ ಸೆಪ್ಟೆಂಬರ್ 02: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ಅವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣಾ Cr. No. 155/25 U/S NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯು ಎಸಿಪಿ ರವರಾದ ಶ್ರೀಮತಿ ವಿಜಯಕ್ರಾಂತಿ ಕೆ ಎಸ್ ಪಿ ಎಸ್ ರವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳಿಂದ ಯಶಸ್ವಿಯಾಗಿ ಕೈಗೊಳ್ಳಲಾಗಿದೆ.