
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣ ಸಮಾರಂಭ
Monday, September 8, 2025
Edit
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ೨೦೨೪-೨೫ ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿಎಸ್ಎಸ್ಎಲ್ಸಿ ಹಾಗೂ ಪದವಿ ಪೂರ್ವ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ, ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಎಸ್ಸಿಡಿಸಿಸಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನೆರವೇರಿತು.
ಈ ವೇಳೆ 216 ಗಂಟೆಗಳ ನಿರಂತರ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪುರಸ್ಕೃತೆ ಉಡುಪಿಯ ದೀಕ್ಷಾ ವಿ ಮತ್ತು 170 ಗಂಟೆಗಳ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪುರಸ್ಕೃತೆ ರೆಮೋನಾ ಇವೆಟ್ಟ ಪಿರೇರಾ ಅವರಿಗೆ ಗೌರವ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಗಳ ಅಧ್ಯಕ್ಷ, ಸಹಕಾರಿ ರತ್ನ ಡಾ. ಎಮ್ ಎನ್ ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಎಂಡಿ ಗೋಪಾಲ್ ಕೃಷ್ಣ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೆಶಕರು ಮತ್ತಿತ್ತರರು ಉಪಸ್ಥಿತರಿದ್ದರು.

