
ಪಾಂಡೇಶ್ವರ ಮಹಿಳಾ ಠಾಣೆಯ ಎಎಸ್ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
Saturday, September 27, 2025
Edit
ಮಂಗಳೂರು ಸೆಪ್ಟೆಂಬರ್ 27: ಪಾಂಡೇಶ್ವರ ಮಹಿಳಾ ಠಾಣೆಯ ಎ.ಎಸ್.ಐ. ರಾಜೇಶ್ ಹೆಗ್ಡೆ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದ್ದಾರೆ.
ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಮನೆಗೆ ಊಟಕ್ಕೆ ಬಂದಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಕರ್ತವ್ಯ ಆರಂಭಿಸಿ, ಬಂದರು ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದರು. ರಾಜೇಶ್ ಮೂಲತಃ ಕಾಸರಗೋಡು ಜಿಲ್ಲೆಯವರಾಗಿದ್ದು, ಮಂಗಳೂರಿನ ಉರ್ವಸ್ಟೋರ್ ನಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಮಗನನ್ನು ಅಗಲಿದ್ದಾರೆ.