
ಧರ್ಮಸ್ಥಳ ಪ್ರಕರಣದಲ್ಲಿ ಒಂದು ಆ್ಯಂಗಲ್ ನಲ್ಲಿ ಷಡ್ಯಂತ್ರ ಕಾಣ್ತಾ ಇದೆ – ಸಚಿವ ದಿನೇಶ್ ಗುಂಡೂರಾವ್
Friday, October 10, 2025
Edit
ಮಂಗಳೂರು ಅಕ್ಟೋಬರ್ 10: ಧರ್ಮಸ್ಥಳ ಪ್ರಕರಣದಲ್ಲಿ ಒಂದು ಆ್ಯಂಗಲ್ ನಲ್ಲಿ ಷಡ್ಯಂತ್ರ ಕಾಣ್ತಾ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ತನಿಖೆ ನಡೆಸುತ್ತಿದೆ. ಯಾವುದೇ ಒತ್ತಡಕ್ಕೆ ಮಣಿಯಬೇಕಿಲ್ಲ. ನನಗೆ ಎಸ್‌ಐಟಿ ತನಿಖೆ ಬಗ್ಗೆ ಪೂರ್ತಿ ವಿಶ್ವಾಸವಿದೆ. ನನಗಿರುವ ಮಾಹಿತಿಯಂತೆ ಸ್ವಲ್ಪಮಟ್ಟಿನ ಷಡ್ಯಂತರ ನಡೆದಿದೆ. ಈ ಬಗ್ಗೆ ಯಾವ ಸಾಕ್ಷ್ಯ ಇದೆ ಎಂಬುದನ್ನು ಎಸ್‌ಐಟಿ ಹೇಳಬೇಕಿದೆ. ಅಗತ್ಯವಿದ್ದರೆ ಎಸ್‌ಐಟಿ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇನ್ನು ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ. ಈಗ ಮುಖ್ಯಮಂತ್ರಿ ಇದ್ದಾರೆ. ಪಕ್ಷದ ಹೈಕಮಾಂಡ್, ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನ ಅಂತಿಮ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ನಾಯಕ ಹಾಗೂ ಜನಪ್ರಿಯ ನಾಯಕ ಎಂದರು.