ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನ ಬಂಧನ: ಕಳವು ಮಾಡಿದ ಪಿಕಪ್ ವಾಹನ ಮತ್ತು ಬೈಕ್ ವಶಕ್ಕೆ
Tuesday, October 7, 2025
Edit
ಮಂಗಳೂರು ಅಕ್ಟೋಬರ್ 07: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿರುತ್ತಾರೆ.
ದಿನಾಂಕ: 30-09-2025 ರಂದು ರಾತ್ರಿ ಸುಮಾರು 9-00 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10-00 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ದಿ: 03-10-2025 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೊ ನಂ:126/2025 ಕಲಂ: 303(2) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪತ್ತೆ ಕಾರ್ಯವನ್ನು ನಡೆಸುತ್ತಿದ್ದ ಸಮಯ ಈ ದಿನ ದಿನಾಂಕ: 07-10-2025 ರಂದು ಯುವಕನೋರ್ವನು ಬೈಕ್‌ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ
1. ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್ ಪ್ರಾಯ(29), ವರ್ಷ ತಂದೆ: ಶಾಜಿ @ ಶಾಫಿ ವಾಸ: ವಯಲಿಲ್ ವೀಡು, ವೆಟ್ಟೂರ್ ಪೋಸ್ಟ್, ರಾತಿಕ್ಕಲ್, ವರ್ಕಳಾ ಗ್ರಾಮ, ತಿರುವನಂತಪುರಂ ಜಿಲ್ಲೆ, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತನು ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಾರಂ ಮಾಲ್ ಬಳಿಯಿಂದ ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮೊ ನಂ: 209/2025 ಕಲಂ: 303(2) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿತ್ತು. ಅಲ್ಲದೇ ಈತನು ದಿನಾಂಕ: 30-09-2025 ರಂದು ಕುಳಾಯಿ ಬಳಿಯಿಂದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ಮಾಡಿರುವುದು ತನಿಖೆಯಿಂದ ತಿಳಿದುಬಂದಂತೆ ಈ ಎರಡು ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ವಾಹನಗಳ ಒಟ್ಟು ಮೊತ್ತ ರೂ. 3,10,000/- ಆಗಬಹುದು.
ಆರೋಪಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್ ಎಂಬಾತನು ಕುಖ್ಯಾತ ಕಳ್ಳತನ ಆರೋಪಿಯಾಗಿದ್ದು, ಈತನ ವಿರುದ್ದ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೊಬೈಲ್ ಕಳ್ಳತನ, ವಾಹನ ಕಳ್ಳತನ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯವನ್ನು ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಶಿಧರ ಶೆಟ್ಟಿ, ಎಎಸ್‌ಐ ರಾಜೇಶ್ ಆಳ್ವ,ಸಿಬ್ಬಂದಿಯವರಾದ ಉಮೇಶ್,ವಿನೋದ್ ಕುಮಾರ್,ನಾಗರಾಜ್, ಸುನೀಲ್ ಕುಮಾರ್ ರವರು ನಡೆಸಿರುತ್ತಾರೆ.