ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ಹೊಂಬಾಳೆ ಫಿಲ್ಮ್ಸ್ ಮಾಲಕ ವಿಜಯ್ ಕಿರಗಂದೂರು
Saturday, October 11, 2025
Edit
ಕಟೀಲು ಅಕ್ಟೋಬರ್ 11: ಕಾಂತಾರ ಚಾಪ್ಟರ್ 1 ಸಕ್ಸಸ್ ಹಿನ್ನಲೆ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು.
ಕಾಂತಾರ ಅಧ್ಯಾಯ1 ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ವಿಶ್ವಾದ್ಯಂತ 500 ಕೋಟಿ ಗಳಿಸಿದೆ ಎಂದು ಹೊಂಬಾಳೆ ಫಿಲಂಸ್ ಅಧಿಕೃತವಾಗಿ ತಿಳಿಸಿದೆ.